Mandya| ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯದಿಂದ ಮಂಡ್ಯ ನಗರದಲ್ಲಿ ದುರ್ಘಟನೆ ಸಂಭವಿಸಿದ್ದು, 3 ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ. ಹೆಲ್ಮೆಟ್ ತಪಾಸಣೆ ವೇಳೆ ಪೊಲೀಸರ ಮುಂದೆ ಗಾಡಿ ನಿಲ್ಲಸಲು ಹೋಗಿ ಆಯತಪ್ಪಿ ಬಿದ್ದು, ರಿತೀಕ್ಷ ಎಂಬ ಮಗುವೊಂದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಸ್ವರ್ಣಸಂದ್ರ ಸಮೀಪದ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಇನ್ನೂ ಈ ಪ್ರಕರಣ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಮೂವರು ಎಎಸ್ಐಗಳನ್ನು ಸಸ್ಪೆಂಡ್ ಮಾಡಲಾಗಿದೆ.
ಇದನ್ನೂ ಓದಿ: ಭಯೋತ್ಪಾದಕರು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ; ಗಯಾನದಿಂದ ಪಾಕಿಸ್ತಾನಕ್ಕೆ ಶಶಿ ತರೂರ್ ಎಚ್ಚರಿಕೆ| warning
ಮಗುವನ್ನ ಮಡಿಲಲ್ಲಿಟ್ಟುಕೊಂಡು ತಂದೆ-ತಾಯಿ ಗೋಳಾಡುತ್ತಿದ್ದರೆ ಟ್ರಾಫಿಕ್ ಪೊಲೀಸರ ವಿರುದ್ಧ ಸಾರ್ವಜನಿಕರು ಘೋಷಣೆ ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗ್ದ ಮಗುವಿನ ಸಾವಿಗೆ ಯಾರು ಹೊಣೆ ಎಂದು ಸ್ಥಳೀಯರು, ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಅವರು ಪೊಲೀಸರನ್ನ ತರಾಟೆ ತೆಗೆದುಕೊಂಡಿದ್ದಾರೆ.
ಘಟನೆಗೆ ವಿಷಾಧ ವ್ಯಕ್ತಪಡಿಸಿರುವ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಪ್ರಕರಣ ಸಂಬಂಧ ಇಲಾಖೆಯ ತನಿಖೆ ಮಾಡುತ್ತೇವೆ ಎಂದಿದ್ದಾರೆ.
ಮಿಮ್ಸ್ ಆಸ್ಪತ್ರೆ ಶವಗಾರದ ಬಳಿ ತರಲಾಗಿದ್ದ ಮಗುವಿನ ಮೃತದೇಹವನ್ನು ಕುಟುಂಬಸ್ಥರು ವಾಪಸ್ ತೆಗೆದುಕೊಂಡು ಹೋಗಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಒಪ್ಪದ ಪೋಷಕರು, ಮತ್ತೆ ಮಗುವಿನೊಂದಿಗೆ ಹೆದ್ದಾರಿಗೆ ತೆರಳಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.