ನ್ಯೂಸ್

ಹಾಸ್ಟೆಲ್​ನಲ್ಲಿ ರಾತ್ರಿ ಊಟ ಸೇವಿಸಿ ಕಾಲೇಜಿನ 30 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು| Kolar

ಕೋಲಾರ; ಹಾಸ್ಟೆಲ್​ನಲ್ಲಿ ರಾತ್ರಿ ಊಟ ಸೇವಿಸಿ ಫುಡ್ ಪಾಯಿಸನ್ ಸಂಭವಿಸಿದ ಪರಿಣಾಮ, ವಿದ್ಯಾಜ್ಯೋತಿ ಕಾಲೇಜಿನ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಕೋಲಾರದಲ್ಲಿ ನಡೆದಿದೆ. ವಿದ್ಯಾರ್ಥಿಗಳು ಕಾಲೇಜು ಹಾಸ್ಟೆಲ್‌ನಲ್ಲಿ ಊಟ ಸೇವಿಸಿದ ಬಳಿಕ ಒಬ್ಬರಾದ ನಂತರ ಒಬ್ಬರು ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ಇನ್ನೂ ಈ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಕೋಲಾರದ ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

(ಏಜೆನ್ಸೀಸ್)

ಸದ್ಯ ಎಲ್ಲಾ ವಿದ್ಯಾರ್ಥಿಗಳ ಸ್ಥಿತಿ ಈಗ ಸ್ಥಿರವಾಗಿದೆ, ಗಂಭೀರವಾದ ಆರೋಗ್ಯ ಸಮಸ್ಯೆ ಯಾರಿಗೂ ಇಲ್ಲ ಎಂಬುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಇನ್ನೂ ಈ ಘಟನೆಯಿಂದ ವಿದ್ಯಾರ್ಥಿಗಳ ಕುಟುಂಬದವರು ಆತಂಕಕ್ಕೆ ಒಳಗಾಗಿದ್ದಾರೆ. ಹಲವಾರು ಪೋಷಕರು ಆಸ್ಪತ್ರೆಗೆ ಭೇಟಿ ನೀಡಿ ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯು ಈ ಘಟನೆಯ ಕುರಿತು ತನಿಖೆ ಆರಂಭಿಸಿದೆ. ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ತಡರಾತ್ರಿಯಲ್ಲಿ ಈರುಳ್ಳಿ ದೋಸೆ, ಇಡ್ಲಿ ಮತ್ತು ಚಟ್ನಿ ಸೇವಿಸಿದ ಬಳಿಕ ವಿದ್ಯಾರ್ಥಿಗಳು ವಾಂತಿ ಮತ್ತು ಬೇದಿಯಿಂದ ಬಳಲಿದ್ದಾರೆ. ವಿದ್ಯಾರ್ಥಿಗಳನ್ನು ಪರೀಕ್ಷಿಸಿದ ವೈದ್ಯರು ಫುಡ್ ಪಾಯಿಸನ್ ಆಗಿ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.