ಬೆಂಗಳೂರು: ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ(cm) ಸಿದ್ದರಾಮಯ್ಯ ಘೋಷಿಸಿದರು.
ಇದನ್ನೂ ಓದಿ:ಮಕ್ಕಳಿಗೆ ಸಂಸ್ಕಾರ, ವಿವೇಕಯುತ ಶಿಕ್ಷಣ ನೀಡಿ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. NPS ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು OPS ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.
1964ರಲ್ಲಿ ಆರಂಭವಾದ ನೌಕರರ ಸಂಘ ಇಷ್ಟು ಮಹತ್ತರ ವರ್ಷಗಳ ಕಾಲ ನಿರಂತರವಾಗಿ ನೌಕರರ ಕಷ್ಟ ಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಜೊತೆಗೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸುವ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೀರಿ. ಇದಕ್ಕೆ ನೀವೆಲ್ಲರೂ ಅಭಿನಂದನಾರ್ಹರು ಎಂದು ಶ್ಲಾಘಿಸಿದರು.
ರೈತರಿಗೆ, ಕೃಷಿಗೆ, ಪಂಪ್ ಸೆಟ್ ಗಳಿಗೆ ಹಗಲಲ್ಲೂ 7 ಗಂಟೆ ಅಗತ್ಯ ವಿದ್ಯುತ್ ಸರಬರಾಜು ಮಾಡಲು ಶಕ್ತರಾಗುತ್ತೇವೆ. ಈ ಗುರಿ ಇಟ್ಟುಕೊಂಡು ಕೆಲಸಗಳು ನಡೆಯುತ್ತಿವೆ. 60,000 ಮೆಘಾ ವ್ಯಾಟ್ ಉತ್ಪಾದನೆ ಗುರಿ ನಾವು ತಲುಪಿದ ತಕ್ಷಣ ಇದು ಸಾಧ್ಯವಗಲಿದೆ. ವಿದ್ಯುತ್ ಪ್ರಮುಖ ಕಚ್ಛಾವಸ್ತು ಎನ್ನುವುದನ್ನು ನಾವು ಮರೆಯಬಾರದು ಎಂದರು.
ನೌಕರರು ಮತ್ತು ಕಾರ್ಮಿಕರು ಬಹಳ ಶ್ರಮ ವಹಿಸಿ ಕೆಲಸ ನಿರ್ವಹಿಸುತ್ತಿದ್ದೀರಿ. ನಿಮ್ಮ ಎಲ್ಲಾ ಬೇಡಿಕೆಗಳನ್ನೂ ಈಡೇರಿಸಲು ನಮ್ಮ ಸರ್ಕಾರ ಸಿದ್ಧವಿದೆ. ನಾವು ನಿಮ್ಮ ಜತೆಗೆ ಇದ್ದೇವೆ ಎಂದು ಕರೆ ನೀಡಿದರು.