ಚಿತ್ರದುರ್ಗ:ಜಿಲ್ಲಾಡಳಿತ,ಜಿಪಂ,ಆರೋಗ್ಯ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಡಿ.3ರಂದು ಮಧ್ಯಾಹ್ನ 12ಕ್ಕೆ ನಗರದ ಮಹಾರಾಜ ಮದಕರಿ ನಾಯಕ ಪ್ರಥಮ ದರ್ಜೆ ಕಾಲೇಜಿನ ಶ್ರೀ ಗುರು ವಾಲ್ಮೀಕಿ ಮಹರ್ಷಿಗಳ ಸಭಾಂಗಣದಲ್ಲಿ ವಿಶ್ವ ಏಡ್ಸ್ ದಿನ ಹಮ್ಮಿಕೊಳ್ಳ ಲಾಗಿದೆ. ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್ ಉದ್ಘಾಟಿಸುವರು. ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಸಂದೀಪ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಏಡ್ಸ್ ಮತ್ತು ಕ್ಷಯರೋಗ ನಿಯಂತ್ರಣ ಕಾರ‌್ಯಕ್ರಮ ಜಿಲ್ಲಾ ಅನುಷ್ಠಾನಾಧಿಕಾರಿ ಡಾ.ಸಿ.ಒ.ಸುಧಾ,ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ.ರವೀಂದ್ರ ಮತ್ತಿತರರು ಉಪಸ್ಥಿತರಿರುವರು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್,ಪ್ರಾಂಶುಪಾಲ ಡಿ.ಆರ್.ರಂಗಸ್ವಾ ಮಿ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.