ನ್ಯೂಸ್

VIDEO| ಮೊಹರಂ ಮೆರವಣಿಗೆ ವೇಳೆ ವಿದ್ಯುತ್​ ತಂತಿ ತಗುಲಿ ನಾಲ್ವರ ಮೃತ್ಯು

Webdesk - Manjunatha B

ರಾಂಚಿ: ಮೊಹರಂ ಹಬ್ಬದ ಮೆರವಣಿಗೆ ವೇಳೆ ವಿದ್ಯುತ್​ ತಂತಿ ತಗುಲಿ ನಾಲ್ವರು ಮೃತಪಟ್ಟು 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್​ನ ಬೊಕಾರೊ ಜಿಲ್ಲೆಯಲ್ಲಿ ನಡೆದಿದೆ.

ಬೊಕಾರೊ ಜಿಲ್ಲೆಯ ಪೆಟರ್​ವಾರ್​ ಬ್ಲಾಕ್​ನ ಖೆಟ್ಕೊ ಎಂಬ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದ್ದು, ಮೊಹರಂ ಹಬ್ಬದ ಮೆರವಣಿಗೆ ವೇಳೆ ಕಬ್ಬಿಣದಿಂದ ಮಾಡಿದ ತಾಜಿಯಾವು 11 ಸಾವಿರ ವೋಲ್ಟೇಜ್​ ಇರುವ ವಿದ್ಯುತ್​ ತಂತಿಗೆ ತಾಗಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್​ ಘಟನೆಯು ಬೆಳಗ್ಗೆ 6 ಘಂಟೆ ಸುಮಾರಿಗೆ ಸಂಭವಿಸಿದ್ದು, 11 ಸಾವಿರ ವೋಲ್ಟೇಜ್​ ಇರುವ ವಿದ್ಯುತ್​ ತಂತಿಗೆ ಕಬ್ಬಿಣದಿಂದ ಮಾಡಿದ ತಾಜಿಯಾ ತಾಕಿದ ಪರಿಣಾಮ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಬೊಕಾರೊ ಥರ್ಮಲ್ ಡಿವಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್ ಮಾಹಿತಿ ನೀಡಿದ್ದಾರೆ.