ನ್ಯೂಸ್

Statue ಉದ್ಘಾಟನೆಗೆ ಸಿದ್ಧತೆ ಮಾಡುತ್ತಿದ್ದ ವೇಳೆ ವಿದ್ಯುತ್​ ಸ್ಪರ್ಶಿಸಿ ನಾಲ್ವರು ಸಾವು, ಐವರು ಗಂಭೀರ

ಅಮರಾವತಿ: ಪ್ರತಿಮೆ (Statue) ಉದ್ಘಾಟನೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ವಿದ್ಯುತ್​ ಸ್ಫರ್ಶಿಸಿ ನಾಲ್ವರು ಯುವಕರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಉಂದ್ರಜಾವರಂ ಮಂಡಲದ ತಾಟಿಪರ್ರು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಬೊಳ್ಳ ವೀರರಾಜು, ಪಾಮರ್ತಿ ನಾಗೇಂದ್ರ, ಮರಿಶೆಟ್ಟಿ ಮಣಿಕಂಠ ಮತ್ತು ಕಸಗಣಿ ಕೃಷ್ಣ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಘಟನೆ ಕುರಿತು ಮಾತನಾಡಿರುವ ಪೊಲೀಸ್​ ಅಧಿಕಾರಿ ಶ್ರೀನಿವಾಸ್​ ರಾವ್​, ಪ್ರತಿಮೆ ಉದ್ಘಾಟನೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ವಿದ್ಯುತ್​ ಸ್ಪರ್ಧಿಸಿ ಐವರು ಗಾಯಗೊಂಡಿದ್ದು, ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅಧಿಕಾರಿಗಳು ಸಲ್ಲಿಸುವ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್​ ಆಫೀಸರ್​ ಶ್ರೀನಿವಾಸ್​ ರಾವ್ ತಿಳಿಸಿದ್ದಾರೆ.