ನ್ಯೂಸ್

4 ರಾಜ್ಯಗಳ ಚುನಾವಣಾ ಫಲಿತಾಂಶ 2023: ಮತಗಟ್ಟೆ ಸಮೀಕ್ಷೆ ಹೇಳುವುದೇನು?

ಮೋಹನ್​ ಶೆಟ್ಟಿ

ಮಧ್ಯಪ್ರಧೇಶ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೂ ಮುನ್ನ ನಡೆಯುತ್ತಿರುವ ಪಂಚ ರಾಜ್ಯಗಳ ಚುನಾವಣಾ ಪೈಕಿ ಇದೀಗ ನಾಲ್ಕು ರಾಜ್ಯಗಳ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಕುತೂಹಲದಿಂದ ಕಾಯುತ್ತಿರುವ ಫಲಿತಾಂಶ ಪ್ರಕಟಣೆಗೆ ಸದ್ಯ ಕ್ಷಣಗಣನೆ ಆರಂಭಗೊಂಡಿದೆ. ಈ ಮಧ್ಯೆ ರಿಸಲ್ಟ್​ ಹಿಂದಿನ ಲೆಕ್ಕಾಚಾರಗಳು, ಸಮೀಕ್ಷೆಗಳು ತಿಳಿಸಿರುವುದೇನು? ಎಂಬುದರ ವಿವರ ಹೀಗಿದೆ.

ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್​ಗಢ ಅಸೆಂಬ್ಲಿಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮಿಜೋರಾಂನಲ್ಲಿ ಸೋಮವಾರ ಮತ ಎಣಿಕೆ ನಡೆಯಲಿದೆ ಎಂದು ಭಾರತ ಚುನಾವಣೆ ಆಯೋಗ ತಿಳಿಸಿದೆ. ನಾಲ್ಕೂ ರಾಜ್ಯಗಳಲ್ಲಿ ಮತ ಎಣಿಕೆಗೆ ಸಕಲ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ.

ಮತಗಟ್ಟೆ ಸಮೀಕ್ಷೆಗಳು ಒಂದಷ್ಟು ಲೆಕ್ಕಾಚಾರಗಳನ್ನು ಕೊಂಚ ಮಟ್ಟಿಗೆ ತಗ್ಗಿಸಿವೆ. ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಆಸುಪಾಸಿನ ಫಲಿತಾಂಶ ದೊರೆಯಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಛತ್ತೀಸ್‌ಗಢದಲ್ಲಿ ಗೆಲುವಿನ ಮುಖೇನ ಅಧಿಕಾರ ಉಳಿಸಿಕೊಳ್ಳುವ ಭರದಲ್ಲಿ ಕಾಂಗ್ರೆಸ್ ಇದ್ದು, ಉಳಿದಂತೆ ತೆಲಂಗಾಣದಲ್ಲಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ಕೂಡ ಬಿರುಸಿನ ಪೈಪೋಟಿ ಇದೆ.

ಇನ್ನು ರಾಜಸ್ಥಾನದಲ್ಲಿ ಇತಿಹಾಸ ಮರುಕಳಿಸಲಿದೆ ಎಂಬ ನಿರೀಕ್ಷೆ ಹೆಚ್ಚಿದ್ದು, ಬಿಜೆಪಿಗೆ ಬಹುಮತ ಸಿಗಲಿದೆ ಎಂಬುದು ಸದ್ಯ ಸಮೀಕ್ಷೆಗಳ ಸಾರಾಂಶವಾಗಿದೆ, (ಏಜೆನ್ಸೀಸ್).