ನ್ಯೂಸ್

ರಾಜ್ಯದಲ್ಲಿ ಮಂಗಳವಾರ 44 ಹೊಸ ಕೋವಿಡ್ ಪ್ರಕರಣಗಳು ದೃಢ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಹೊಸದಾಗಿ 44 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 24 ಗಂಟೆಗಳ ಅವಧಿಯಲ್ಲಿ 722 ಪರೀಕ್ಷೆಗಳನ್ನು ನಡೆಸಲಾಗಿದ್ದು, ಸೋಂಕು ದೃಢ ಪ್ರಮಾಣ ಶೇ. 6.09 ತಲುಪಿದೆ.

ಸೋಂಕಿತರಲ್ಲಿ 35 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಸದ್ಯ ರಾಜ್ಯದಲ್ಲಿ 79 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಸೋಂಕಿತರಲ್ಲಿ 62 ಮಂದಿ ಮನೆ ಆರೈಕೆಗೆ ಒಳಗಾದರೆ, 17 ಮಂದಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಆರು ಮಂದಿಗೆ ತುರ್ತು ನಿಗಾ ಘಟಕ (ಐಸಿಯು)ದಲ್ಲಿ ಹಾಗೂ 11 ಮಂದಿಗೆ ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.