ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ಸಲುವಾಗಿ ಸಂಚಾರ ಪೊಲೀಸರು ಸೋಮವಾರ ಶಾಲಾ ವಾಹನ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದರು.
ಸೋಮವಾರ ಬೆಳಗ್ಗೆ 7.30ರಿಂದ ಮಧ್ಯಾಹ್ನ 12 ಗಂಟೆ ನಡುವೆ ನಡೆದ ಕಾರ್ಯಾಚರಣೆ ವೇಳೆ ಸಂಚಾರ ಪೊಲೀಸರು, 3924 ವಾಹನಗಳನ್ನು ತಪಾಸಣೆ ನಡೆಸಿ ಮದ್ಯಪಾನ ಮಾಡಿ ವಾಹನ ಚಾಲನೆ ಮತ್ತು ಹೆಚ್ಚುವರಿ ಶಾಲಾ ಮಕ್ಕಳನ್ನು ಕೊಂಡೊಯ್ಯುವರ ಬಗ್ಗೆ ತಪಾಸಣೆ ನಡೆಸಿದ್ದಾರೆ.
ಇದರಲ್ಲಿ 21 ವಾಹನ ಚಾಲನಕರು ಡ್ರಂಕ್ ಆ್ಯಂಡ್ ಡ್ರೈವ್ ಮಾಡಿರುವುದು ಮತ್ತು 445 ವಾಹನದಲ್ಲಿ ನಿಗದಿಗಿಂತ ಹೆಚ್ಚುವರಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವುದು ಕಂಡು ಬಂದಿದ್ದು, ಕೇಸ್ ದಾಖಲಿಸಲಾಗಿದೆ.
ಡಿಡಿ ಕೇಸ್‌ನಲ್ಲಿ ಸಿಕ್ಕಿಬಿದ್ದ ಶಾಲಾ ವಾಹನಗಳನ್ನು ವಶಕ್ಕೆ ಪಡೆದಿದ್ದು, ಪರವಾನಗಿ (ಪರ್ಮಿಟ್) ರದ್ದುಪಡಿಸಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಕ್ಕೆ ಶಿಾರಸು ಮಾಡಲಾಗುತ್ತದೆ. ಈ ವಿಶೇಷ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಸಂಚಾರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.