ಕಾರ್ಗಲ್: ಸಾಗರ ಗ್ರಾಮಾಂತರ ಭಾಗದಲ್ಲಿ 50 ಸಾವಿರ ಬಿಜೆಪಿ ಸದಸ್ಯರನ್ನು ಪಕ್ಷಕ್ಕೆ ಸೇರಿಸುವ ಗುರಿ ಹೊಂದಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಹೇಳಿದರು.
ಸಮೀಪದ ಜಾಲಿಗದ್ದೆಯ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನವೀನ್ ಜೈನ್ ನಿವಾಸದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ 2024ನೇ ಸಾಲಿನ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಸಾಗರ ಗ್ರಾಮಾಂತರ ಭಾಗದಲ್ಲಿ ಸ್ಥಳೀಯ ಬಿಜೆಪಿ ಪ್ರಮುಖರು 100-200 ಹೊಸ ಸದಸ್ಯರನ್ನು ನೋಂದಣಿ ಮಾಡಿಸಿ ಬಿಜೆಪಿ ಬಲವರ್ಧನೆಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.
ಮಂಡಲ ಅಧ್ಯಕ್ಷ ದೇವೇಂದ್ರ ಯಲಕುಂದ್ಲಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನವೀನ್ ಜೈನ್, ತಾಲೂಕು ಪ್ರಧಾನ ಕಾರ್ಯದರ್ಶಿ ರಮೇಶ್ ಹಾರೆಕೊಪ್ಪ, ತಾಲೂಕು ಮುಖಂಡರಾದ ಗೌತಮ್, ಬಿ.ಟಿ.ರವೀಂದ್ರ, ಮಹಾಶಕ್ತಿ ಕೇಂದ್ರ ಪದಾಧಿಕಾರಿಗಳು, ಜಿಲ್ಲಾ ವಿಶೇಷ ಆಹ್ವಾನಿತರು ಹಾಗೂ ಬೂತ್ ಅಧ್ಯಕ್ಷರು ಇದ್ದರು.