ನ್ಯೂಸ್

ನೀರಿನ ಯೋಜನೆಗೆ 500 ಕೋಟಿ ರೂ. ಅನುದಾನ

ತೀರ್ಥಹಳ್ಳಿ: ತಾಲೂಕಿನಲ್ಲಿ ಶುದ್ಧ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ 500 ಕೋಟಿ ರೂ. ಅನುದಾನ ನೀಡಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ ಹಿರೇಸರ ಗ್ರಾಮದ 68 ಲಕ್ಷ ರೂ. ವೆಚ್ಚದ ಜಲಜೀವನ್ ಮಿಷನ್ ಯೋಜನೆಗೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಶುದ್ಧ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡಿದೆ ಎಂದು ಹೇಳಿದರು.
ಹಿಂದೆ ಕುಡಿಯಲು ಗದ್ದೆಯಲ್ಲಿರುವ ಗುಮ್ಮಿ ಕೆರೆಯ ನೀರನ್ನು ಬಳಸಲಾಗುತ್ತಿತ್ತು. ಪ್ರಸ್ತುತ ವಿದ್ಯುತ್ ಮತ್ತು ಕಾರ್ಮಿಕರ ಸಮಸ್ಯೆಯಿಂದ ನೀರನ್ನು ಒದಗಿಸಲು ಸಮಸ್ಯೆ ಎದುರಾಗಿದೆ. ಹೀಗಾಗಿ ತಾಲೂಕಿನ 36 ಗ್ರಾಪಂಗಳಿಗೆ ಶಾಶ್ವತವಾಗಿ ಶುದ್ಧ ಕುಡಿಯುವ ನೀರನ್ನು ಒದಗಿಸಲು ಬಹುಗ್ರಾಮ ಯೋಜನೆಯಡಿ 344 ಕೋಟಿ ರೂ. ಅನುದಾನ ಮಂಜೂರಾಗಿದೆ. ಜನರ ಆರೋಗ್ಯ ಸುಧಾರಿಸಿದರೆ ಜನಪ್ರತಿನಿಧಿಗಳಾದ ನಮ್ಮ ಶ್ರಮ ಸಾರ್ಥಕವಾಗುತ್ತದೆ ಎಂದರು.
ಗ್ರಾಪಂ ಅಧ್ಯಕ್ಷ ರಾಘವೇಂದ್ರ ಪವಾರ್, ಉಪಾಧ್ಯಕ್ಷ ಜಯಣ್ಣ, ಸದಸ್ಯ ಗುರುಮೂರ್ತಿ, ತಾಪಂ ಮಾಜಿ ಸದಸ್ಯರಾದ ಟಿ.ಮಂಜುನಾಥ್, ಭಾರತಿ ಸುರೇಶ್, ಗಿರೀಶ್ ಭಂಡಾರಿ ಇದ್ದರು.