ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಟಿಕೇಟ್ ಇಲ್ಲದೆ ಪ್ರಯಾಣಿಸಿದ ೩೭೫೪ ಪ್ರಯಾಣಿಕರನ್ನು ಪತ್ತೆಹಚ್ಚಿ 6.54 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.
ಮೇ ತಿಂಗಳಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿದ್ದು, ಈ ವೇಳೆ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸಿದ ೪೨,೬೮೦ ವಾಹನಗಳನ್ನು ತನಿಖೆಗೊಳಪಡಿಸಿ ೩೭೦೮ ಪ್ರಕರಣಗಳನ್ನು ಪತ್ತೆಹಚ್ಚಿ, ೩೭೫೪ ಟಿಕೇಟ್ ರಹಿತ ಪ್ರಯಾಣಿಕರಿಂದ ೬,೫೪,೭೩೮ ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ. ಈ ಮೂಲಕ ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ ೮೮,೪೨೯ ರೂ.ಗಳನ್ನು ತನಿಖಾಧಿಕಾರಿಗಳು ತಡೆದಿದ್ದಾರೆ.