ನ್ಯೂಸ್

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; 6 ಮಂದಿ ಮೃತ್ಯು

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ9 ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಬಿಡಿ ಗ್ರಾಮದ ಬಳಿ ನಡೆದಿದೆ.

ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಮೃತರು ಧಾರವಾಡ ಜಿಲ್ಲೆಯವರು ಎಂದು ತಿಳಿದು ಬಂದಿದೆ. ಮದುವೆ ಆರತಕ್ಷತೆಗೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ವೇಗವಾಗಿ ಬರುತ್ತಿದ್ದ ಕಾರು ಚಾಲಕ ನಿಯಂತ್ರಣ ತಪ್ಪಿ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಆ ನಂತರ ಮರಕ್ಕೆ ಡಿಕ್ಕಿ ಹೊಡೆದಿದೆ. ಮೃತರು ಗೋಲಿಹಳ್ಳಿಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಅತಿವೇಗ ಚಾಲನೆಯೇ ದುರ್ಘಟನೆಗೆ ಕಾರಣ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದುಮ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.