69ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ನವೆಂಬರ್ 01ರಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ “2024-24ನೇ ಸಾಲಿನ ರಾಜ್ಯ ಮಟ್ಟದ 69ನೇ ಕರ್ನಾಟಕ ರಾಜ್ಯೋತ್ಸವ” ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭದ ಧ್ವಜಾರೋಹಣವನ್ನು ನೆರವೇರಿಸಿ ನಂತರ ನಾಡಿನ ಜನತೆಗೆ ರಾಜ್ಯೋತ್ಸವ ಸಂದೇಶವನ್ನು ನೀಡಲಿರುವರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತರಿರುವರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಪ್ರಾಸ್ತಾವಿಕ ನುಡಿಗಳನ್ನಾಡಲಿರುವರು.
ಸಮಾಂಭದ ಅಧ್ಯಕ್ಷತೆಯನ್ನು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ವಹಿಸಲಿದ್ದು, ಸಚಿವರು, ಶಾಸಕರು ಉಪಸ್ಥಿರಿರುವರು. ವಿವಿಧ ಶಾಲೆಗಳಿಂದ ಸುಮಾರು 14000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಶಾಲೆಯ ಶಿಕ್ಷಕರ ಸಮ್ಮುಖದೊಂದಿಗೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.