ನ್ಯೂಸ್

6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ: ನೂತನ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಡಾ. ಎಪಿಜೆ ಅಬ್ದುಲ್ ಕಲಾಂ ಮತ್ತು ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಮುಸ್ಲಿಂ, ಕ್ರಿಶ್ವಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಪರಿಶಿಷ್ಟ ಜಾತಿ, ಪ.ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಮಾ. 10 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಸತಿ ಶಾಲೆಗಳು ಹಾಗೂ ಅಲ್ಪಸಂಖ್ಯಾತರ ಜಿಲ್ಲಾ, ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.