ನ್ಯೂಸ್

ವಿದ್ಯುತ್ ಅವಘಡದಿಂದ ಕೊಟ್ಟಿಗೆಯಲ್ಲಿದ್ದ 7 ಆಕಳುಗಳು ಸಜೀವ ದಹನ

- 3 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಏಳು ಆಕಳು ಸುಟ್ಟು ಕರಕಲು

ಕಾರವಾರ: ಜಾನುವಾರುಗಳಿದ್ದ ಕೊಟ್ಟಿಗೆಗೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಶಾರ್ಟ್ ಸರ್ಕಿಟ್​​ನಿಂದ 3 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಏಳು ಆಕಳುಗಳು ಸಾವನ್ನಪ್ಪಿವೆ. ಈ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ಹಳೂರನಲ್ಲಿ ನಡೆದಿದೆ.

ಉತ್ತರಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ಹಳೂರ ಓಣೆಯ ಮಂಜುನಾಥ ಶೇಟ್ ಎಂಬುವರಿಗೆ ಸೇರಿದ ಜಾನುವಾರುಗಳು ಸುಟ್ಟು ಕರಕಲಾಗಿವೆ. ಎಂದಿನಂತೆ ಮನೆಯವರು ದನಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿ ಮೇವು ಹಾಕಿ ಕಟ್ಟಿದ್ದಾರೆ ಗುರುವಾರ ನಸುಕಿನ ಮೂರು ಗಂಟೆಯ ಸುಮಾರಿಗೆ ಆಕಸ್ಮಿಕವಾಗಿ ಕೊಟ್ಟಿಗೆಯಲ್ಲಿ ಬೆಂಕಿ ತಗುಲಿ ಕೊಟ್ಟಿಗೆಯಲ್ಲಿದ್ದ ಕಟ್ಟಿಗೆ ಹಂಚುಗಳು ಸಿಡಿಯುತ್ತಿರುವ ಶಬ್ದ ಕೇಳಿ ಕೂಡಲೆ ಅಕ್ಕ ಪಕ್ಕದವರು ಸ್ಥಳಕ್ಕೆ ಆಗಮಿಸಿದ್ದಾರೆ.

ರಾತ್ರಿ ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಈ ಅವಘಡ ಸಂಭವಿಸಿರಬಹುದು ಎನ್ನಲಾಗಿದೆ.ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ 3 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಏಳು ಆಕಳುಗಳ ಸಜೀವ ದಹನವಾಗಿವೆ.

ಮಾಲೀಕರು ಕಣ್ಣೀರು ಹಾಕಿದ್ದಾರೆ. ಕಂದಾಯ ಹಾಗೂ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಡಗೋಡು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.