ಬೆಂಗಳೂರು:
ಸರ್ಕಾರದ ಹಲವು ಅಭಿವೃದ್ಧಿ ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿರುವುದನ್ನು ಬದಲಿಸಿ ಕಂದಾಯ ಸಚಿವರನ್ನು ಅಧ್ಯಕ್ಷರನ್ನಾಗಿ ಅಥವಾ ಸಿಎಂ ಆಯ್ಕೆ ಮಾಡುವ ಇತರ ಸಚಿವರನ್ನು ಪದನಿಮಿತ್ತ ಅಧ್ಯಕ್ಷರನ್ನಾಗಿ ಮಾಡುವ 7 ಪ್ರತ್ಯೇಕ ವಿಧೇಯಕಗಳಿಗೆ ವಿಧಾನ ಪರಿಷತ್‌ನಲ್ಲಿ ಅಂಗೀಕಾರ ನೀಡಲಾಗಿದೆ.
ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ವಿಧೇಯಕವನ್ನು ಮಂಡಿಸಿದರು. ಸದನ ಸರ್ವಾನುಮತದಿಂದ ಅನುಮೋದಿಸಿತು.
*ಕೂಡಲ ಸಂಗಮ ಅಭಿವೃದ್ಧಿ ಮಂಡಳಿ
*ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ
*ಬನವಾಸಿ ಅಭಿವೃದ್ಧಿ ಪ್ರಾಧಿಕಾರ
*ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ
*ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ
*ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ
*ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ