ಬೆಂಗಳೂರು: ರಾಜ್ಯ ಸರ್ಕಾರದ ವರ್ಗಾವಣೆ ಸರಣಿ ಮುಂದುವರಿದಿದೆ. ತಡರಾತ್ರಿ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಇದೀಗ ಭಾರೀ ಪ್ರಮಾಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ 71 ವಾಣಿಜ್ಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ನಿಯೋಜನೆಗೊಂಡಿರುವ ಸ್ಥಳಕ್ಕೆ ಕೂಡಲೇ ವರದಿ ಮಾಡಿಕೊಳ್ಳಲು ಸರ್ಕಾರ ನಿರ್ದೇಶನ ನೀಡಿದೆ.
ವರ್ಗಾವಣೆಗೊಂಡ ಅಧಿಕಾರಿಗಳು ಮತ್ತು ವರ್ಗಾವಣೆ ಮೇಲೆ ನೇಮಿಸಿದ ಹುದ್ದೆಗಳ ಮಾಹಿತಿ ಈ ಕೆಳಕಂಡಂತಿದೆ.