ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 8,387 ಮಂದಿ ಕರೊನಾದಿಂದ ಚೇತರಿಸಿಕೊಂಡು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹಾಗೇ 7,665 ಹೊಸ ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. 139 ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 2,40,948ಕ್ಕೆ ಏರಿಕೆಯಾಗಿದ್ದು, ಚೇತರಿಸಿಕೊಂಡವರು 1,56,949 ಮಂದಿ. ಮೃತಪಟ್ಟವರು 4201 ಸೋಂಕಿತರು ಹಾಗೂ ಸಕ್ರಿಯ ಪ್ರಕರಣಗಳು 79,782 ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಸದ್ಯ ಒಂದು ದಿನದಲ್ಲಿ ಪತ್ತೆಯಾಗುವ ಹೊಸ ಪ್ರಕರಣಗಳಿಗಿಂತ ಡಿಸ್ಚಾರ್ಜ್ ಆದವರ ಸಂಖ್ಯೆಯೇ ಹೆಚ್ಚಾಗುತ್ತಿರುವುದು ಸಮಾಧಾನ ತಂದಿದೆ. ಒಟ್ಟು 697 ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.