ಕುವೆಂಪು ವಿವಿಯಲ್ಲಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಧ್ವಜಾರೋಹಣ ನೆರವೇರಿಸಿದರು. ಎ.ಎಲ್. ಮಂಜುನಾಥ್, ಪ್ರೊ. ಎಸ್.ಎಂ.ಗೋಪಿನಾಥ್, ಪ್ರೊ. ಎನ್.ಡಿ.ವಿರೂಪಾಕ್ಷ, ಪ್ರೊ. ಗಜಾನನ ಪ್ರಭು, ಡಾ. ರವೀಂದ್ರ ಗೌಡ ಇದ್ದರು. 
ನ್ಯೂಸ್

ಜಿಲ್ಲೆಯ ವಿವಿಧೆಡೆ 78ನೇ ಸ್ವಾತಂತ್ರೋತ್ಸವ

ಶಿವಮೊಗ್ಗ: ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು, ಶಾಲಾ-ಕಾಲೇಜು, ರಾಜಕೀಯ ಪಕ್ಷಗಳು, ಸಹಕಾರಿ ಬ್ಯಾಂಕ್‌ಗಳು ಸಹಿತ ಹಲವು ಬಡಾವಣೆಗಳಲ್ಲಿ 78ನೇ ಸ್ವಾತಂತ್ರೋತ್ಸವವನ್ನು ಧ್ವಜಾರೋಹಣ ನೆರವೇರಿಸುವ ಜತೆಗೆ ಸಿಹಿ ವಿತರಿಸುವ ಮೂಲಕ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ನಗರದ ಎಸ್‌ಇಎಸ್ ಆಡಳಿತ ಮಂಡಳಿ ಕಚೇರಿಯಲ್ಲಿ ಎನ್‌ಇಎಸ್ ಅಧ್ಯಕ್ಷ ಜಿ.ಎಸ್.ನಾರಾಯಣರಾವ್ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್, ನಿರ್ದೇಶಕರಾದ ಮಧುರಾವ್, ಎನ್.ಟಿ.ನಾರಾಯಣರಾವ್, ಆಜೀವ ಸದಸ್ಯರಾದ ರುಕ್ಮಿಣಿ ವೇದವ್ಯಾಸ, ಡಾ. ಎಸ್.ಟಿ.ಅರವಿಂದ, ಆನಂದ, ಗುರುಪ್ರಸಾದ್, ಜಗದೀಶ್, ಕೆ.ವಿ.ರವೀಂದ್ರ, ಕುಲಸಚಿವ ಪ್ರೊ. ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಸಿ.ಎಂ.ನೃಪತುಂಗ ಭಾಗವಹಿಸಿದ್ದರು.
ಶಿವಮೊಗ್ಗ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನದಲ್ಲಿ ಕ್ಯಾಪ್ಟನ್ ಕೆ.ಟಿ.ವಿಜಯ್ ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳು ಸುತ್ತಲಿನ ರಸ್ತೆಗಳಲ್ಲಿ ಜಾಥಾ ನಡೆಸಿದರು. ಸಂಸ್ಥೆ ಅಧ್ಯಕ್ಷ ಡಾ. ಡಿ.ಆರ್.ನಾಗೇಶ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶೋಭಾ ವೆಂಕಟರಮಣ, ಮುಖ್ಯ ಶಿಕ್ಷಕರಾದ ತೀರ್ಥೆಶ್, ಟಿ.ವಿ.ಗಜೇಂದ್ರನಾಥ್ ಉಪಸ್ಥಿತರಿದ್ದರು. ಮಕ್ಕಳು ಅನೇಕ ನೃತ್ಯ, ನಾಟಕ ಮತ್ತು ಭಾಷಣಗಳ ಮೂಲಕ ಒಮ್ಮೆ ನಮ ಗತ ವೈಭವವನ್ನು ನೆನಪಿಗೆ ತಂದು ಕೊಟ್ಟರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷ ಬಿ.ಗೋಪಿನಾಥ, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಮಾಜಿ ಅಧ್ಯಕ್ಷರಾದ ಜೆ.ಆರ್.ವಾಸುದೇವ, ಡಿ.ಎಂ.ಶಂಕರಪ್ಪ, ಕೆ.ವಿ.ವಸಂತಕುಮಾರ್, ಮಂಜೇಗೌಡ, ಸುರೇಶ್, ಜಿಲ್ಲಾ ವಿತರಕರ ಸಂಘದ ಅಧ್ಯಕ್ಷ ದೇವರಾಜ್, ಮಧುಸೂದನ್ ಐತಾಳ್ ಮತ್ತಿತರರಿದ್ದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಾಚಾರ್ಯ ಡಾ. ಬಿ.ಜಿ.ಚನ್ನಪ್ಪ ಧ್ವಜಾರೋಹಣ ನೆರವೇರಿಸಿದರು. ಉಪನ್ಯಾಸಕ ಪ್ರೊ. ಸಮೀಯುಲ್ಲಾ ಸಾಬ್ ವಿಶೇಷ ಉಪನ್ಯಾಸ ನೀಡಿದರು. ಡಾ. ಸಕ್ರೀನಾಯ್ಕ್, ಕ್ರೀಡಾ ನಿರ್ದೇಶಕ ಜಯಕೀರ್ತಿ ಇದ್ದರು. ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ಅಧ್ಯಕ್ಷ ಡಾ. ಆರ್.ಎಂ.ಮಂಜುನಾಥಗೌಡ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ ಮತ್ತಿತರರಿದ್ದರು.