ನ್ಯೂಸ್

7ರಂದು ಮೈಸೂರು ಬಂದ್

ಡಾ.ಬಿ.ಆರ್.ಅಂಬೇಡ್ಕರ್ ಕುರಿತ ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆ ಖಂಡಿಸಿ ಡಾ.ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿ ವತಿಯಿಂದ ಜ.7 ರಂದು ಮೈಸೂರು ಬಂದ್‌ಗೆ ಕರೆ ನೀಡಲಾಗಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ತಿಳಿಸಿದರು.

ಅಂಬೇಡ್ಕರ್ ಕುರಿತ ಅಮಿತ್ ಷಾ ಹೇಳಿಕೆ ಖಂಡಿಸಿ ಎಲ್ಲರೂ ಸ್ವಯಂ ಪ್ರೇರಿತರಾಗಿ ಪಾಲ್ಗೊಂಡು ಬಂದ್ ಯಶಸ್ವಿಗೊಳಿಸಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಅಂದು ಬೆಳಗ್ಗೆ 6ರಿಂದ ಸಂಜೆ 4ರವರೆಗೆ ಬಂದ್ ನಡೆಯಲಿದೆ. ವಿವಿಧ ಸಂಘಟನೆಗಳು, ಒಕ್ಕೂಟಗಳು ಈಗಾಗಲೇ ಬೆಂಬಲ ನೀಡಿವೆ. ಶಾಲಾ-ಕಾಲೇಜು, ಸಾರಿಗೆ ಸೇವೆ, ವ್ಯಾಪಾರ ವಹಿವಾಟು ಸ್ಥಗಿತಗೊಳಿಸುವ ಮೂಲಕ ಬಂದ್ ಬೆಂಬಲಿಸಬೇಕು ಎಂದು ಕೋರಿದರು.