ಮುಂಬೈ: ಲಾರಿ-ಟಂ ಟಂ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದು, 7ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯೂ ರತ್ನಗಿರಿ ಜಿಲ್ಲೆಯ ದಪೋಲಿ-ಹರ್ನೈ ರಸ್ತೆಯಲ್ಲಿ ಸಂಭವಿಸಿದ್ದು, ಲಾರಿ ಚಾಲಕ ಒನ್ವೇನಲ್ಲಿ ವೇಗವಾಗಿ ಚಲಿಸಿದ ಪರಿಣಾ ಮ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ಧಾರೆ.
ದಾಪೋಲಿಯಿಂದ ಹರ್ನೈ ಕಡೆಗೆ 15ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ, ಟಂ ಟಂಗೆ ಒನ್ವೇನಲ್ಲಿ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 8 ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದು, 7ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ಕುರಿತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ಧಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವವರ ಚಿಕಿತ್ಸೆಯ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರದಿಂದ ಭರಿಸಲಾಗುವುದು ಎಂದು ತಿಳಿಸಿದ್ದಾರೆ.