ನ್ಯೂಸ್

ಮಹಿಳೆಯೊಂದಿಗೆ ಅಸಭ್ಯ ವರ್ತನೆ! 8 ಬಂಗಾಳ ಕಾರ್ಮಿಕರನ್ನು ವಿವಸ್ತ್ರಗೊಳಿಸಿ ಥಳಿತ

ನವದೆಹಲಿ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಹಿನ್ನಲೆ ಪಶ್ಚಿಮ ಬಂಗಾಳದ ಎಂಟು ಕಾರ್ಮಿಕರನ್ನು ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿ, ವಿವಸ್ತ್ರಗೊಳಿಸಿ ನಡುರಸ್ತೆಯಲ್ಲಿ ಮೆರವಣಿಗೆ ಮಾಡಿಸಿದ ಘಟನೆ ಒಡಿಶಾದ ಸುಂದರ್‌ಗಢ್ ಜಿಲ್ಲೆಯಲ್ಲಿ ವರದಿಯಾಗಿದೆ.

ವರದಿಗಳ ಪ್ರಕಾರ, ತನ್ನ ಮನೆಗೆ ಬಲವಂತವಾಗಿ ಪ್ರವೇಶಿಸಿ, ತನ್ನೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ಮಹಿಳೆಯೊಬ್ಬರು ಆರೋಪಿಸಿದ ಬೆನ್ನಲ್ಲೇ ಸ್ಥಳೀಯರು ಎಂಟು ಮಂದಿ ಕಾರ್ಮಿಕರನ್ನು ಒಂದೆಡೆ ಸೇರಿಸಿ, ಅವರ ಕೈಗಳನ್ನು ಕಟ್ಟಿ, ಮನಬಂದಂತೆ ಥಳಿಸಿದ್ದಾರೆ.

ಮಹಿಳೆಯೊಂದಿಗೆ ಕೆಟ್ಟದಾಗಿ ನಡೆದುಕೊಂಡ ಕಾರಣ ಸ್ಥಳೀಯರು 8 ಮಂದಿಯನ್ನು ವಿವಸ್ತ್ರಗೊಳಿಸಿ, ಹಗ್ಗಗಳಿಂದ ಕಟ್ಟಿ, ಸಾರ್ವಜನಿಕವಾಗಿ ಮೆರವಣಿಗೆ ಮಾಡಿಸಿದ್ದಲ್ಲದೇ, ಅವರ ಮೇಲೆ ತೀವ್ರ ದೈಹಿಕ ಹಲ್ಲೆಯೂ ನಡೆಸಿದ್ದಾರೆ ಎಂದು ಹೇಳಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮಧ್ಯಪ್ರವೇಶಿಸಿ, ಕಾರ್ಮಿಕರನ್ನು ವಶಕ್ಕೆ ಪಡೆದಿದ್ದಾರೆ.

“ನಾವು ಸ್ಥಳದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕಾರ್ಮಿಕರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ದೂರಿದ್ದಾರೆ. ಸದ್ಯ ಈ ಘಟನೆಯ ತನಿಖೆ ನಡೆಯುತ್ತಿದೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ,(ಏಜೆನ್ಸೀಸ್).