ಕೋಲಾರ: ಜಿಲ್ಲೆಯ ಕೆಜಿಎಫ್ ಪೊಲೀಸರು ನಿವೃತ್ತಿ ಹೊಂದಿದ ಶ್ವಾನಕ್ಕೆ ಸನ್ಮಾನಿಸಿ ಅದ್ಧೂರಿಯಾಗಿ ಬೀಳ್ಕೊಟ್ಟಿದ್ದಾರೆ. 2015 ಮಾರ್ಚ್ 13ರಂದು ಸೇವೆಗೆ ಸೇರಿದ್ದ ಲ್ಯಾಬ್ರಡಾರ್ ತಳಿಯ ಹೆಣ್ಣು ಶ್ವಾನ ಏಂಜಲ್, ಎಂಟು ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗುತ್ತಿದೆ.
ಇದನ್ನೂ ಓದಿ: ಪಾಕಿಸ್ತಾನದ ಧ್ವಜ ಮುದ್ರಿಸಿ ಅಶಾಂತಿಗೆ ಸಂಚು ರೂಪಿಸಲಾಗುತ್ತಿದೆ ಎಂದು ಸ್ವತಂತ್ರ ಅಭ್ಯರ್ಥಿ ವಿರುದ್ಧ ದೂರು
ಸ್ಫೋಟಕ ಪತ್ತೆಯಲ್ಲಿ ಪರಿಣಿತಿ ಹೊಂದಿದ್ದ ಏಂಜಲ್, ನಿನ್ನೆ(ಏ.30) ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶದಲ್ಲಿ ಕರ್ತವ್ಯ ನಿರ್ವಹಿಸಿತ್ತು. ರಾಷ್ಟ್ರಪತಿ, ಪ್ರಧಾನ ಮಂತ್ರಿ, ಉಪರಾಷ್ಟ್ರಪತಿ, ಕೇಂದ್ರ ಮಂತ್ರಿಗಳು ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳ ಕಾರ್ಯಕ್ರಮದಲ್ಲಿ ಕಾರ್ಯ ನಿರ್ವಹಿಸಿತ್ತು.
ಇದೀಗ ಎಂಟು ವರ್ಷಗಳ ಕಾಲ ಪೊಲೀಸ್ ಶ್ವಾನದಳದಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ ಏಂಜಲ್ ಶ್ವಾನವನ್ನು ಎಸ್ಪಿ ಧರಣಿದೇವಿ ಸ್ಮಾನಿಸಿ ಬೀಳ್ಕೊಟ್ಟಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.