ಬೆಂಗಳೂರು:
ಜೇನು ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಕ್ರಮ ವಹಿಸಲಾಗುವುದು ಎಂದು ತೋಟಗಾರಿಕಾ
ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಮೇಲ್ಮನೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿಯ ಶಾಂತರಾಮ್ ಬುಡ್ನ ಸಿದ್ದಿ ಅವರ ಪ್ರಶ್ನೆಗೆ ಉತ್ತರಿಸಿ, ರಾಜ್ಯದಲ್ಲಿ ಸುಮಾರು 40,000 ಜನ ಜೇನುಕೃಷಿಯಲ್ಲಿ ತೊಡಗಿಸಿಕೊಂಡಿದ್ದು, 800 ಟನ್ ಜೇನು ತುಪ್ಪ ಉತ್ಪಾದನೆಯಾಗುತ್ತಿದೆ ಎಂದರು.
ರಾಜ್ಯ ಮತ್ತು ಜಿಲ್ಲಾ ವಲಯ ಜೇನು ಸಾಕಣೆ ಅಭಿವೃದ್ಧಿ ಯೋಜನೆಗಳಡಿ ಜೇನು ಪೆಟ್ಟಿಗೆ, ಕುಟುಂಬ
ಹಾಗೂ ಸ್ಟ್ಯಾಂಡ್ ಖರೀದಿಗೆ ಸಹಾಯಧನ ನೀಡಲಾಗುತ್ತಿದೆ. 2 ದಿನ ಜೇನು ಕೃಷಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.