ನ್ಯೂಸ್

ದೆಹಲಿಯಲ್ಲಿ 85ರ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ; 28ರ ಯುವಕ ಅಂದರ್…

ನವದೆಹಲಿ: ದೆಹಲಿಯ ನೇತಾಜಿ ಸುಭಾಷ್ ಪ್ಲೇಸ್ ಪ್ರದೇಶದಲ್ಲಿ 85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಆಕಾಶ್ (28) ಎಂದು ಗುರುತಿಸಲಾಗಿದ್ದು, ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯೂ) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ತಮ್ಮ ಎಕ್ಸ್ (ಹಿಂದಿನ ಟ್ವಿಟರ್) ಹ್ಯಾಂಡಲ್ನಲ್ಲಿ ಈ ಘಟನೆಯ ಬಗ್ಗೆ ದೆಹಲಿ ಪೊಲೀಸರನ್ನು ಪ್ರಶ್ನಿಸಿದ್ದಾರೆ.

ಶುಕ್ರವಾರ ಮುಂಜಾನೆ 4 ಗಂಟೆ ಸುಮಾರಿಗೆ ವೃದ್ಧೆ ತನ್ನ ಮನೆಯೊಳಗೆ ಮಲಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದ್ದು ಆರೋಪಿಗಳು ಮನೆಯೊಳಗೆ ನುಸುಳಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅವರು ಮಹಿಳೆಯನ್ನು ಥಳಿಸಿದ್ದಲ್ಲದೇ ಬ್ಲೇಡ್ ಬಳಸಿ ತುಟಿಗಳನ್ನು ಕತ್ತರಿಸಿದ್ದಾರೆ ಎಂದು ಆರೋಪಿಸಲಾಗಿದೆ. ವಿವರಗಳ ಪ್ರಕಾರ, ವೃದ್ಧೆಯ ಖಾಸಗಿ ಭಾಗಗಳು ಮತ್ತು ಮುಖಕ್ಕೆ ಗಂಭೀರ ಗಾಯಗಳಾಗಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ವಿವರಗಳೊಂದಿಗೆ ಎಫ್ಐಆರ್ ಪ್ರತಿಯನ್ನು ಒದಗಿಸುವಂತೆ ಡಿಸಿಡಬ್ಲ್ಯೂ ಮುಖ್ಯಸ್ಥರು ದೆಹಲಿ ಪೊಲೀಸರಿಗೆ ನೋಟಿಸ್ನಲ್ಲಿ ಸೂಚಿಸಿದ್ದಾರೆ.

(ಏಜೆನ್ಸೀಸ್)