ನ್ಯೂಸ್

ಕೆಲವೆಡೆ ಭಾರೀ ಮಳೆಯಾಗಿದ್ದರೆ, ಬಹುತೇಕ ರಾಜ್ಯಗಳಲ್ಲಿ ವರುಣನ ಕಣ್ಣಾಮುಚ್ಚಾಲೆ

All India Rain Forecast : ಆರಂಭದಲ್ಲಿ ಬಿಡುವು ಕೊಡದೆ ಸುರಿದ ಮಳೆ ಮತ್ತೆ ನಿರೀಕ್ಷಿಸಿದ ಮಟ್ಟದಲ್ಲಿ ಸುರಿಯಲಿಲ್ಲ. ಮಳೆಗಾಗಿ ರಾಜ್ಯದ ರೈತರು ಎದುರು ನೋಡುತ್ತಿದ್ದಾರೆ. ಹೀಗೆ ಮುಂದುವರಿದರೆ ಕುಡಿಯುವ ನೀರಿಗಾಗಿ ಹಾತೊರೆಯುವ ಸ್ಥಿತಿ ನಿರ್ಮಾಣವಾಗಲಿದೆ. ಅನ್ನದಾತ ಆಗಸದತ್ತ ದೃಷ್ಟಿ ನೆಟ್ಟು ಕೂತಿದ್ದಾನೆ. ಇದು ಕೇವಲ ರಾಜ್ಯದ ಸ್ಥಿತಿಯಲ್ಲಿ ದೇಶದ ಬಹುತೇಕ ರಾಜ್ಯಗಳಲ್ಲಿ ಇದೇ ಸ್ಥಿತಿ ಇದೆ.


ಈ ರಾಜ್ಯಗಳಲ್ಲಿ ಮಳೆ :
ಕಳೆದ 24 ಗಂಟೆಗಳಲ್ಲಿ, ಪಶ್ಚಿಮ ಬಂಗಾಳ ಮತ್ತು ಕೇರಳದ ಕೆಲವಡೆ ಭಾರೀ ಮಳೆಯಾಗಿದ್ದರೆ ಇನ್ನು ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ, ದಕ್ಷಿಣ ಛತ್ತೀಸ್‌ಗಢ, ಪೂರ್ವ ಮಧ್ಯಪ್ರದೇಶ ಮತ್ತು ಪಶ್ಚಿಮ ಹಿಮಾಲಯದ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗಿದೆ. ಲಕ್ಷದ್ವೀಪ, ಈಶಾನ್ಯ ಭಾರತ ಮತ್ತು ಸಿಕ್ಕಿಂನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ.


ಲಕ್ಷದ್ವೀಪ, ಆಂಧ್ರಪ್ರದೇಶ, ದಕ್ಷಿಣ ಛತ್ತೀಸ್‌ಗಢ, ಪೂರ್ವ ಮಧ್ಯಪ್ರದೇಶದ ಕೆಲವು ಭಾಗಗಳು, ಈಶಾನ್ಯ ಭಾರತ ಮತ್ತು ಸಿಕ್ಕಿಂನಲ್ಲಿಯೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಗಾಲಿದೆ. ಕರ್ನಾಟಕ ಮತ್ತು ತಮಿಳುನಾಡಿನ 1 ಅಥವಾ 2 ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ.


ಒಂದು ವಾರದಿಂದ ಮಳೆಯ ನಿರೀಕ್ಷೆಯಿಲ್ಲ :
ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಸದ್ಯದಲ್ಲಿಯೇ ಮಳೆಯಾಗುವ ಯಾವ ಲಕ್ಷಣವೂ ಇಲ್ಲ. ಕನಿಷ್ಠ ಮುಂದಿನ ಒಂದು ವಾರದವರೆಗೆ ಇದೇ ರೀತಿಯ ಶುಷ್ಕ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.