ಪುಣೆ: ತರಕಾರಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 90ಕ್ಕೂ ಹೆಚ್ಚು ಅಂಗಡಿಗಳು 2 ಟೆಂಪೋ ಸುಟ್ಟು ಸುಟ್ಟು ಭಸ್ಮವಾಗಿರುವ ಘಟನೆ ಪುಣೆಯಲ್ಲಿ ನಡೆದಿದೆ.
ಮಂಗಳವಾರ ಮುಂಜಾನೆ ಪುಣೆಯ ಹಡಪ್ಸರ್‌ನಲ್ಲಿರುವ ತರಕಾರಿ ಮಾರುಕಟ್ಟೆಯಲ್ಲಿ ಸಂಭವಿಸಿದ್ದು, ಸ್ಟಾಲ್‌ಗಳು ಮತ್ತು ಎರಡು ಟೆಂಪೋ ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಬೆಂಕಿ ಹೇಗೆ ಹೊತ್ತಿಕೊಂಡಿತ್ತು ಎನ್ನುವ ಬಗ್ಗೆ ಸರಿಯಾದ ಮಾಹಿತಿ ಇಲ್ಲ.