ನಿರ್ಮಾಣ ಹಂತದ ಕಟ್ಟಡದಲ್ಲಿ 13 ಅಡಿಯ ಬೃಹತ್ ಕಾಳಿಂಗ ಸರ್ಪ 
ನ್ಯೂಸ್

ಜನವಸತಿ ಪ್ರದೇಶಕ್ಕೆ ನುಗ್ಗಿದ 13 ಅಡಿ ಉದ್ದದ ಕಾಳಿಂಗ ಸರ್ಪ; ಮುಂದೇನಾಯ್ತು ನೀವೇ ನೋಡಿ! | 13 Feet King Cobra

13 Feet King Cobra: ಆಂಧ್ರಪ್ರದೇಶದಲ್ಲಿ ಸುಮಾರು 13 ಅಡಿ ಉದ್ದದ ದೈತ್ಯ ಕಾಳಿಂಗ ಸರ್ಪವೊಂದು ನಿರ್ಮಾಣ ಹಂತದ ಕಟ್ಟಡದೊಳಗೆ ನುಗ್ಗಿ ಆತಂಕ ಸೃಷ್ಟಿಸಿದೆ. ಬೃಹತ್ ಗಾತ್ರದ ಈ ಸರ್ಪವನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದು, ಸದ್ಯ ಈ ಭಯಾನಕ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಅನಕಾಪಲ್ಲಿ ಜಿಲ್ಲೆಯ ವಿ. ಮಾಡುಗುಲ ಮಂಡಲ ವ್ಯಾಪ್ತಿಯ ಕೆ.ಜೆ. ಪುರಂ ಗ್ರಾಮದ ಮಸೀದಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಜನವಸತಿ ಪ್ರದೇಶಕ್ಕೆ ಹೊಂದಿಕೊಂಡಂತಿರುವ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಇದನ್ನು ಕಂಡು ಭಯಭೀತರಾದ ಸ್ಥಳೀಯರು, ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಉರಗ ತಜ್ಞರಿಗೆ ಸುದ್ದಿ ಮುಟ್ಟಿಸಿದ್ದಾರೆ..

ಎರಡು ಗಂಟೆ ಕಾರ್ಯಾಚರಣೆ ಬಳಿಕ ಸೆರೆ

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಉರಗ ರಕ್ಷಕ ವೆಂಕಟೇಶ್ ಕಾಳಿಂಗ ಸರ್ಪವನ್ನು ಸೆರೆಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ಹರಸಾಹಸ ನಡೆಸಿದ ಅವರು, ಅತ್ಯಂತ ಜಾಗರೂಕತೆಯಿಂದ ಬೃಹತ್ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿದಿದ್ದಾರೆ. ಬಳಿಕ ಹಾವನ್ನು ಸಮೀಪದ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.

ವೈರಲ್ ವಿಡಿಯೋ ನೋಡಿ ಬೆಚ್ಚಿಬಿದ್ದ ನೆಟ್ಟಿಗರು

ಬರೋಬ್ಬರಿ 13 ಅಡಿ ಉದ್ದದ ದೈತ್ಯ ಕಾಳಿಂಗ ಸರ್ಪವೊಂದು ಕಟ್ಟಡದೊಳಗೆ ಹೆಡೆಯೆತ್ತಿ ನಿಂತಿರುವ ಭಯಾನಕ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿವೆ. ಇಷ್ಟು ಬೃಹತ್ ಗಾತ್ರದ ಸರ್ಪವನ್ನು ಕಂಡು ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದು, ವಿಡಿಯೋ ನೋಡಿ ಬೆಚ್ಚಿಬಿದ್ದಿದ್ದಾರೆ

ಇದನ್ನೂ ಓದಿ: ಪತ್ನಿ ಮೇಲೆ ಪಿಟ್‌ಬುಲ್ ನಾಯಿ ಛೂಬಿಟ್ಟ ಕ್ರೂರಿ ಪತಿ: ಎರ್ನಾಕುಳಂನಲ್ಲಿ ಆಘಾತಕಾರಿ ಘಟನೆ! | Kerala Domestic Violence

ಜನವಸತಿ ಪ್ರದೇಶಕ್ಕೆ ನುಗ್ಗಿ ಆತಂಕ ಸೃಷ್ಟಿಸಿದ್ದ ದೈತ್ಯ ಕಾಳಿಂಗ ಸರ್ಪವನ್ನು ಉರಗ ರಕ್ಷಕರು ಹಾಗೂ ಅರಣ್ಯ ಸಿಬ್ಬಂದಿ ಯಾವುದೇ ಅಪಾಯವಾಗದಂತೆ ಸುರಕ್ಷಿತವಾಗಿ ರಕ್ಷಿಸಿದ್ದು, ಅರಣ್ಯಕ್ಕೆ ಬಿಟ್ಟಿದ್ದಾರೆ..