ಮುಂಬೈ: ಕರೊನಾ ವೈರಸ್ ಸೋಂಕು ದಿನೇದಿನೆ ಹೆಚ್ಚಾಗುತ್ತಿದ್ದು, ಭಾರತದಲ್ಲಿ ಕರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಮಂಗಳವಾರ ಮೂರಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಮೂರನೇ ಸಾವು ಸಂಭವಿಸಿದೆ.
ಕರ್ನಾಟಕದ ಕಲಬುರಗಿಯಲ್ಲಿ 75 ವರ್ಷದ ವೃದ್ಧ ಸಾವನ್ನಪ್ಪಿದ್ದ ಮೊದಲ ವ್ಯಕ್ತಿಯಾದರೆ, ದೆಹಲಿಯಲ್ಲಿ 60 ವರ್ಷ ಮೇಲ್ಪಟ್ಟ ಮಹಿಳೆಯೊಬ್ಬರು ಮೃತಪಟ್ಟದ್ದು ಎರಡನೇ ದುರಂತವಾಗಿತ್ತು. ಇದೀಗ ಮಹಾರಾಷ್ಟ್ರದ ಮುಂಬೈನಲ್ಲಿರುವ ಕಸ್ತೂರ್ಬಾ ಹಾಸ್ಪಿಟಲ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 64 ವರ್ಷದ ವ್ಯಕ್ತಿ ಕರೋನಾ ಸೋಂಕಿಗೆ ಒಳಗಾಗಿ ಮೃತಪಟ್ಟಿದ್ದಾರೆ. (ಏಜೆನ್ಸೀಸ್)