ರಾಮನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಮುಖ್ಯಪೇದೆಯೊಬ್ಬರು ಮೃತಪಟ್ಟ ಘಟನೆ ಬಿಡದಿಯ ಬೈರಮಂಗಲ ಕ್ರಾಸ್ ಬಳಿ ನಡೆದಿದೆ.
ರಾಮನಗರ ತಾಲೂಕಿನ ತಿಮ್ಮೇಗೌಡನದೊಡ್ಡಿ ಗ್ರಾಮದ ಚಂದ್ರಶೇಖರ್ ಮೃತರು. ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದರು. ಭಾನುವಾರ ಸಂಜೆ ಕಗ್ಗಲೀಪುರದಿಂದ ಬೈನ್ನಲ್ಲಿ ರಾಮನಗರಕ್ಕೆ ವಾಪಾಸ್ ಆಗುವ ವೇಳೆ ಅಪರಿಚಿತ ವಾಹನ ಡಿಕ್ಕಿಯೊಡೆದಿದೆ. ಸೋಮವಾರ ಚಂದ್ರಶೇಖರ್ ಅವರ ವಿವಾಹ ವಾರ್ಷಿಕೋತ್ಸವ ಇತ್ತು. ಮುನ್ನಾದಿನವೇ ವಿಧಿ ಅವರ ಬಾಳಲ್ಲಿ ಆಟವಾಡಿಬಿಟ್ಟಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.