ನವದೆಹಲಿ: ಕಾಂಗ್ರೆಸ್ ಪಕ್ಷದ ಶಾಸಕರ ಸಭೆಗೂ ಮುನ್ನವೇ ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ.
40ಕ್ಕೂ ಹೆಚ್ಚು ಶಾಸಕರ ವಿಶ್ವಾಸವನ್ನ ಅಮರೀಂದರ್ ಸಿಂಗ್ ಕಳೆದುಕೊಂಡಿದ್ದು, ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಬಂಡಾಯ ಉಲ್ಬಣಗೊಂಡಿದೆ. ಸದ್ಯಕ್ಕೆ ಶಮನಗೊಳ್ಳುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಯಸಿದ ಶಾಸಕರು ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದಿದ್ದರು. ಈ ವಿವಾದ ಶಮನ ಹಿನ್ನೆಲೆ ಇಂದು(ಶನಿವಾರ) ಸಂಜೆ ಸಿಎಲ್ಪಿ ಸಭೆ ಕರೆಯಲಾಗಿತ್ತು. ಸಭೆಗೂ ಮುನ್ನವೇ ರಾಜ್ಯಪಾಲರಿಗೆ ಅಮರೀಂದರ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿದ್ದಾರೆ.
ಮುಂಬರುವ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಇನ್ನೂ ಒಂದು ವರ್ಷ ಇರುವಾಗಲೇ ಸಿಎಂ ಬದಲಾವಣೆ ಪಂಜಾಬ್ ರಾಜ್ಯ ರಾಜಕೀಯದಲ್ಲಿ ಅಲ್ಲೋಲ್ಲ-ಕಲ್ಲೋಲ ಸೃಷ್ಟಿಸಿದೆ.