ಸಕಲೇಶಪುರ: ಮಂಗಳೂರಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಅನಿಲ ಸೋರಿಕೆಯಾಗುತ್ತಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಿರಾಡಿ ಘಾಟ್ನಲ್ಲಿ ಕೆ ಗಂಟೆಗಳ ಕಾಲ ಸಂಪೂರ್ಣ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ತದನಂತರ ಘಟನೆ ನಡೆದ ಸ್ಥಳ ಹೊರತುಪಡಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಪೊಲೀಸರು ಅನುವು ಮಾಡಿಕೊಟ್ಟಿದ್ದಾರೆ.
ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಗುರುವಾರ ಮುಂಜಾನೆ ಈ ಘಟನೆ ನಡೆದಿದೆ. ಭಾರತ್ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಇಂಜಿನ್ ಒಳಗೆ ಸಿಲುಕಿದ್ದ ಚಾಲಕನನ್ನು ಕ್ರೇನ್ ಬಳಸಿ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ.