ನ್ಯೂಸ್

ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತ: ಹಲವು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ

Mandara

ನವದೆಹಲಿ: ನೋಯ್ಡಾ ಸೆಕ್ಟರ್ 11ರಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಸಂಜೆ ಕುಸಿದುಬಿದ್ದಿದೆ. ಅವಶೇಷಗಳ ಎಡೆಯಲ್ಲಿ ಅನೇಕ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರಿಹಾರ ಕಾರ್ಯಾಚರಣೆ ಭರದಿಂದ ಸಾಗಿದೆ.

ಕಟ್ಟಡ ಕುಸಿತಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಸದ್ಯ ಐವರು ಕಾರ್ಮಿಕರನ್ನು ಸ್ಥಳೀಯರ ನೆರವಿನೊಂದಿಗೆ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಅವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.(ಏಜೆನ್ಸೀಸ್)