ಕಾನ್ಫುರ: ನಗರದಲ್ಲಿ ಮಿನಿ ಬಸ್ ಮತ್ತು ಜೆಸಿಬಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 17 ಮಂದಿ ಮೃತಪಟಿದ್ದಾರೆ. ಗಂಭೀರ ಗಾಯಗೊಂಡ ಐವರ ಸ್ಥಿತಿ ಚಿಂತಾಜನಕವಾಗಿದೆ.
ಉತ್ತರ ಪ್ರದೇಶದ ಕಾನ್ಫುರದ ಸಚೇಂದಿ ಬಳಿಯ ಕಿಸಾನ್ ನಗರ ಕಾಲುವೆ ಬಳಿ ಮಂಗಳವಾರ ಸಂಜೆ ಜೆಸಿಬಿ ವೇಗವಾಗಿ ಬಂದು ಬಸ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ನಲ್ಲಿದ್ದ 17 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತಕ್ಕೀಡಾದ ಬಸ್ ದೆಹಲಿಯಿಂದ ಲಕ್ನೋಗೆ ಸಂಚರಿಸುತ್ತಿತ್ತು. ಇದನ್ನೂ ಓದಿರಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಸಜೀವ ದಹನ, ಇಬ್ಬರ ಸ್ಥಿತಿ ಗಂಭೀರ
ಕಾನ್ಫುರ ಅಪಘಾತ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ, ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.