ರಾಮನಗರ: ವಾರಾಂತ್ಯ ಕರ್ಫ್ಯೂ ಆದೇಶ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ನಡೆಸಿದ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ 31 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಕನಕಪುರ ತಾಲೂಕಿನ ಸಂಗಮ ಪ್ರದೇಶದ ಸುತ್ತಮುತ್ತ ವಾರಾಂತ್ಯದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಹೇರಿತ್ತು. ಇದನ್ನು ಉಲ್ಲಂಘಿಸಿ, ಜನರನ್ನು ಸೇರಿಸಿ ಭಾನುವಾರ ಪಾದಯಾತ್ರೆ ಮಾಡಿದ ಕಾರಣ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಸಾತನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A1 ಆರೋಪಿ ಡಿ.ಕೆ.ಶಿವಕುಮಾರ್, A2 ಆರೋಪಿ ಸಿದ್ದರಾಮಯ್ಯ ಆಗಿದ್ದಾರೆ. ಇವರ ಜತೆಗೆ ಡಿ.ಕೆ.ಸುರೇಶ್, ವೀರಪ್ಪ ಮೊಯ್ಲಿ, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ. ಪರಮೇಶ್ವರ್, ಈಶ್ವರ್ ಖಂಡ್ರೆ, ನಟಿ ಉಮಶ್ರೀ, ಬಿ.ಕೆ.ಹರಿಪ್ರಸಾದ್, ಎಂ.ಬಿ.ಪಾಟೀಲ್, ರಾಮಲಿಂಗರೆಡ್ಡಿ, ಎಸ್. ರವಿ, ಟಿ.ಬಿ.ಜಯಚಂದ್ರ. ಎಚ್.ಎಂ.ರೇವಣ್ಣ, ಸಲೀಂ ಅಹಮದ್, ಎನ್.ಎ. ಹ್ಯಾರಿಸ್, ಲಕ್ಷ್ಮಿ ಹೆಬ್ಬಾಳ್ಕರ್, ವಿನಯ್ ಕುಲಕರ್ಣಿ, ಪ್ರಿಯಾಂಕಾ ಖರ್ಗೆ, ಯತಿಂದ್ರ ಸಿದ್ದರಾಮಯ್ಯ, ಸಾಧು ಕೋಕಿಲ, ದುನಿಯಾ ವಿಜಯ್ ಸೇರಿ 31 ಜನರ ವಿರುದ್ಧ ಕನಕಪುರ ತಹಸೀಲ್ದಾರ್ ವಿಶ್ವನಾಥ್ ಅವರು ಎಫ್ಐಆರ್ ದಾಖಲಿಸಿದ್ದಾರೆ.