ಚಿಕ್ಕಮಗಳೂರು: ಚಿಕ್ಕಮಗಳೂರು ಬಾಡಿ ಬಿಲ್ಡರ್ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದ ಯುವಕ ಬರ್ಬರವಾಗಿ ಹತ್ಯೆಯಾಗಿದ್ದಾನೆ.
ಮನು (21) ಕೊಲೆಯಾದವ. ಅನ್ಯಕೋಮಿನ ಯುವಕರು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಿಸ್ಟರ್ ಚಿಕ್ಕಮಗಳೂರು ಆಗುವ ಕನಸು ಹೊತ್ತಿದ್ದ ಮನು ಹಿಂದೂ ಕಾರ್ಯಕರ್ತ ಎನ್ನಲಾಗಿದೆ.
ಚಿಕ್ಕಮಗಳೂರು ನಗರದ ಅಯ್ಯಪ್ಪ ನಗರದಲ್ಲಿ ಬುಧವಾರ ರಾತ್ರಿ ಮನು ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತುದ್ದವ ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾನೆ.
ಅನ್ಯ ಕೋಮಿನವರು ಮನುನನ್ನು ಹತ್ಯೆ ಮಾಡಿದ್ದಾರೆಂದು ಹಿಂದೂಪರ ಸಂಘಟನೆಗಳು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಎಸ್ಪಿ ಅಕ್ಷಯ್ ಹಾಗೂ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದರು.