ಬೆಂಗಳೂರು: ಹಿಜಾಬ್ ವಿವಾದ ಭುಗಿಲೆದ್ದಿದ್ದು, ಹಲವೆಡೆ ಸಂಘರ್ಷ ವಿಕೋಪಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ನಾಳೆಯಿಂದ ರಾಜ್ಯಾದ್ಯಂತ ಮೂರು ದಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ.
ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು, ನಾಳೆಯಿಂದ(ಫೆ.9) ಮೂರು ದಿನ ರಾಜ್ಯಾದ್ಯಂತ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆ ರಾಜ್ಯದಲ್ಲಿ ಶಾಂತಿ ಕಾಪಾಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.
ಹಲವು ಜಿಲ್ಲೆಗಳಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳು, ಪಿಯು ಕಾಲೇಜುಗಳು, ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.