ನ್ಯೂಸ್

ಕರೊನಾ ಹಿನ್ನೆಲೆ ಮಣಿಪಾಲ್​ ಆಸ್ಪತ್ರೆಗೆ ಸಿಎಂ ದಾಖಲು: ಕರೊನಾ ಸ್ಥಿತಿಗತಿ ಕುರಿತು ಆಸ್ಪತ್ರೆಯಿಂದಲೇ ವರ್ಚುವಲ್ ಸಭೆ

ಬೆಂಗಳೂರು: ಕರೊನಾ ಸೋಂಕಿಗೆ ಒಳಗಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿಂದಲೇ ರಾಜ್ಯದ ಕರೊನಾ ಸ್ಥಿತಿಗತಿ ಕುರಿತು ಚರ್ಚಿಸಲು ವರ್ಚುವಲ್ ಸಭೆ ಕರೆದಿದ್ದಾರೆ.

ನಿನ್ನೆ ಸಿಎಂಗೆ ಕರೊನಾ ಸೋಂಕು ದೃಢಪಟ್ಟಿತ್ತು. ವೈದ್ಯರ ಸಲಹೆ ಮೇರೆಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಸಿಎಂ, ರಾಜ್ಯದ ಕೋವಿಡ್ ಸ್ಥಿತಿಗತಿಗೆ ಸಂಬಂಧಪಟ್ಟಂತೆ ಹಿರಿಯ ಅಧಿಕಾರಿಗಳ ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೊಂದಿಗೆ ಇಂದು(ಮಂಗಳವಾರ) ಮಧ್ಯಾಹ್ನ 3 ಗಂಟೆಗೆ ವರ್ಚುಯಲ್ ಸಭೆ ನಡೆಸಲಿದ್ದಾರೆ.

ದಿನಕಳೆದಂತೆ ಕರೊನಾ ಪ್ರಕರಣಗಳ ಸಂಖ್ಯೆ ಹಾಗೂ ಸೋಂಕು ದೃಢತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕ್ರಮಗಳ ಹಿರಿಯ ಅಧಿಕಾರಿಗಳು ಮತ್ತು ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ಸಿಎಂ ಚರ್ಚಿಸಲಿದ್ದಾರೆ.

ಬಿಗಿ ನಿರ್ಬಂಧಗಳು ಜಾರಿಯಲ್ಲಿದ್ದರೂ ಕೆಲ ದಿನಗಳಿಂದ ಸೋಂಕು ಏರುಮುಖವಾಗಿದೆ. ದೈನಂದಿನ ಪ್ರಕರಣಗಳಲ್ಲಿ ಹೆಚ್ಚಾಗಿ ಬೆಂಗಳೂರು ನಗರಕ್ಕೆ ಸೇರಿದ್ದು, ಸರ್ಕಾರ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿದೆ.