ನ್ಯೂಸ್

ಮೃತ ನವೀನ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಚೆಕ್​​ ವಿತರಿಸಿ ಧೈರ್ಯ ಹೇಳಿದ ಸಿಎಂ ಬೊಮ್ಮಾಯಿ

ಹಾವೇರಿ: ಯುದ್ಧಪೀಡಿತ ಯೂಕ್ರೇನ್​ನಲ್ಲಿ ರಷ್ಯಾ ಪಡೆ ನಡೆಸಿದ ಶೆಲ್​ ದಾಳಿಯಲ್ಲಿ ಮೃತಪಟ್ಟ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್​ ಗ್ಯಾನಗೌಡರ ಅವರ ಮನೆಗೆ ಸಿಎಂ ಬಸವರಾಜ ಬೊಮ್ಮಾಯಿ ಶನಿವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ನವೀನ್ ಭಾವಚಿತ್ರಕ್ಕೆ ಹೂ ಹಾಕಿ ಶ್ರದ್ಧಾಂಜಲಿ ಸಲ್ಲಿಸಿದ ಸಿಎಂ, ಮೃತನ ತಂದೆ ಶೇಖರಗೌಡ, ತಾಯಿ ವಿಜಯಲಕ್ಷ್ಮೀ ಹಾಗೂ ಸಹೋದರನಿಗೆ ಸಾಂತ್ವನ ಹೇಳಿದರು. ರಾಜ್ಯ ಸರ್ಕಾರದಿಂದ 25 ಲಕ್ಷ ರೂಪಾಯಿ ಪರಿಹಾರ ವಿತರಿಸಿ ಧೈರ್ಯ ತುಂಬಿದರು.

ನವೀನನ ಮೃತದೇಹವನ್ನು ತರಿಸಿಕೊಡಿ ಎಂದು ಸಿಎಂಗೆ ಪಾಲಕರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ನವೀನನ ಮೃತದೇಹ ತರಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ ಎಂದರು.