ಗದಗ: ಕರೊನಾ ವ್ಯಾಕ್ಸಿನ್ ಹಾಕಿಸಿಕೊಂಡವರಿಗೆ ಮಾತ್ರ ಸಿಗಲಿದೆ ಪಡಿತರ! ವ್ಯಾಕ್ಸಿನ್ ಹಾಕಿಸಿಕೊಳ್ಳದವರಿಗೆ ಈ ಗ್ರಾಮದಲ್ಲಿ ಸಿಗಲ್ಲ ರೇಶನ್ ಇಲ್ಲ...
ಯಾರು ವ್ಯಾಕ್ಸಿನ್ ಹಾಕಿಸಿಕೊಳ್ಳುವದಿಲ್ಲವೋ ಅಂತಹ ಕುಟುಂಬಗಳಿಗೆ ಪಡಿತರ ಕೊಡಬಾರದು. ಇಂತಹದ್ದೊಂದು ರೂಲ್ಸ್ ಜಾರಿಗೆ ತರಲು ಗದಗ ಜಿಲ್ಲೆ ರೋಣ ತಾಲೂಕಿನ ಕೊತಬಾಳ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಗಿದೆ.
ಕರೊನಾ ಹಿನ್ನೆಲೆ ನಡೆದ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಈ ನಿರ್ಣಯವನ್ನ ಸರ್ವಾನುಮತದಿಂದ ಕೈಗೊಳ್ಳಲಾಗಿದೆ. ವ್ಯಾಕ್ಸಿನೇಶನ್ ಹಾಕಿಸಿಕೊಂಡವರಿಗೆ ಆರೋಗ್ಯ ಇಲಾಖೆ ಪತ್ರ ನೀಡಲಿದೆ. ಪಡಿತರ ಚೀಟಿದಾರರು ತಮ್ಮ ಪಡಿತರ ಕಾರ್ಡ್ನೊಂದಿಗೆ ವ್ಯಾಕ್ಸಿನ್ ಹಾಕಿಸಿಕೊಂಡ ಪತ್ರವನ್ನೂ ತರಬೇಕು. ಅಂತಹವರಿಗೆ ಮಾತ್ರವೇ ಪಡಿತರ ವಿತರಣೆ ಮಾಡಲಾಗುತ್ತದೆ.
ಕೆಲವರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. 45 ವರ್ಷ ವಯಸ್ಸು ದಾಟಿದ್ದರೂ ಲಸಿಕೆ ಪಡೆಯಲು ಬರುತ್ತಿಲ್ಲ. ಹಾಗಾಗಿ ಜನರ ಆರೋಗ್ಯ ದೃಷ್ಟಿಯಿಂದ ಈ ನಿರ್ಣಯ ಕೈಗೊಳ್ಳಲಾಗಿದೆ. ಆದರೆ, ಕರೊನಾ ಲಸಿಕೆಗಾಗಿ ರಾಜ್ಯಾದ್ಯಂತ ಲಕ್ಷಾಂತರ ಮಂದಿ ನಿತ್ಯ ಅಲೆಯುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಇಲ್ಲಿನ ಗ್ರಾಪಂ ತೆಗೆದುಗೊಂಡ ಈ ನಿರ್ಧಾರ ಅಚ್ಚರಿ ತರಿಸಿದೆ ಎನ್ನುತ್ತಿದ್ದಾರೆ ಸಾರ್ವಜನಿಕರು.