ಸಿ.ಕೆ. ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಕಾರು ಜಖಂ ಆಗಿರುವುದು.  
ನ್ಯೂಸ್

ಅಪಘಾತದಲ್ಲಿ ದಂಪತಿ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು-ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ಸರಣಿ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದು, 14 ತಿಂಗಳ ಮಗು ತೀವ್ರ ಗಾಯಗೊಂಡಿದೆ.

ಕಡೂರು ರಸ್ತೆಯಲ್ಲಿ ಕಾರು, ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟು 14 ತಿಂಗಳ ಮಗುವೊಂದು ಗಂಭೀರ ಗಾಯಗೊಂಡಿದೆ. ಘಟನೆಯಲ್ಲಿ ಶಿವಮೊಗ್ಗ ಮೂಲದ ಸೈಯದ್ ಆಸಿಫ್ (38) ಹಾಗೂ ಮಜಿನಾ (33) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ಬಂದಿದ್ದ ದಂಪತಿ ಬೈಕ್‌ನಲ್ಲಿ ಶಿವಮೊಗ್ಗಕ್ಕೆ ಕಡೂರು ಮಾರ್ಗವಾಗಿ ವಾಪಸ್ ಹೊರಟಿದ್ದರು. ಕಡೂರು ಕಡೆಗೆ ಹೊರಟಿದ್ದ ಕಾರು ಚಾಲಕರು ಬಹಿರ್ದೆಸೆಗೆಂದು ರಸ್ತೆ ಮಧ್ಯೆಯೇ ಕಾರು ನಿಲ್ಲಿಸಿದ್ದಾರೆ. ಇದೇ ಮಾರ್ಗವಾಗಿ ಸಾಗುತ್ತಿದ್ದ ಬೈಕ್ ಸವಾರ ಕಾರಿನ ಪಕ್ಕದಲ್ಲೇ ಬೈಕ್ ಚಲಾಯಿಸಿಕೊಂಡು ಹೋಗಿದ್ದಾನೆ. ಆಗ ಕಡೂರು ಕಡೆಯಿಂದ ಎದುರಿಗೆ ಬಂದ ಟಿಪ್ಪರ್ ಲಾರಿ, ನಿಲ್ಲಿಸಿದ್ದ ಕಾರು ಮತ್ತು ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಕಾರು ಮತ್ತು ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.