ನ್ಯೂಸ್

ಖ್ಯಾತ ಗಾಯಕಿ ಲತಾ ಮಂಗೇಶ್ಕರ್​ಗೆ ಕರೊನಾ ಪಾಸಿಟಿವ್​, ಐಸಿಯುನಲ್ಲಿ ಚಿಕಿತ್ಸೆ

ಮುಂಬೈ: ಭಾರತದ ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕರೊನಾ ಸೋಂಕು ತಗುಲಿದ್ದು, ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ನಿಗಾ ಘಟಕದಲ್ಲಿ ಲತಾ ಮಂಗೇಶ್ಕರ್​ ಅವರಿಗೆ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯ ಸಹಜ ಸ್ಥಿತಿಯಲ್ಲಿದೆ. ಆದರೆ, ಅವರಿಗೆ ವಯಸ್ಸಾಗಿರುವ ಕಾರಣ ಮುನ್ನೆಚ್ಚರಿಕೆಯಾಗಿ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.