ನ್ಯೂಸ್

ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು: ವಸಂತ ಮಹಲ್‌ನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಡಯಟ್ ಪರೀಕ್ಷಾ ಕೇಂದ್ರದಲ್ಲಿ ಜುಲೈ 22 ರಿಂದ 30 ರವರೆಗೆ 2024-25 ನೇ ಸಾಲಿನ ವಾಣಿಜ್ಯ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪರೀಕ್ಷಾ ದಿನಗಳಂದು ಬೆಳಗ್ಗೆ 10 ಗಂಟೆಯಿoದ ಸಂಜೆ 6 ಗಂಟೆಯವರೆಗೆ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ಸೆಕ್ಷನ್ 163 ರೀತ್ಯ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಘೋಷಿಸಲಾಗಿದ್ದು, ಈ ಪ್ರದೇಶದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗಳನ್ನು ಹೊರತುಪಡಿಸಿ ಅನಧೀಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಮತ್ತು ಸೈಬರ್ ಕೇಂದ್ರಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಆದೇಶಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.