ಕಾರವಾರ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜಲಾಂತರ್ಗಾಮಿ ಐಎನ್ಎಸ್ ಖಂಡೇರಿಯಲ್ಲಿ ಶುಕ್ರವಾರ ಸಮುದ್ರಯಾನ ನಡೆಸಿದರು.
ದೇಶದ ಪ್ರತಿಷ್ಠಿತ ನೌಕಾ ನೆಲೆಯಾದ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿರುವ ಕದಂಬ ನೌಕಾನೆಲೆಗೆ 2 ದಿನದ ಕಾರ್ಯಕ್ರಮ ನಿಮಿತ್ತ ಗುರುವಾರ ಆಗಮಿಸಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮತ್ತು ಅವರ ಕುಟುಂಬಸ್ಥರೊಂದಿಗೆ ಸಂವಾದ ನಡೆಸಿದ್ದರು. ಶುಕ್ರವಾರ ಸಮುದ್ರಯಾನ ನಡೆಸಿದರು.
2019ರಲ್ಲಿ ಸ್ವತಃ ರಾಜನಾಥ ಸಿಂಗ್ ಅವರೇ ಈ ಜಲಾಂತರ್ಗಾಮಿಯನ್ನು ಲೋಕಾರ್ಪಣೆ ಮಾಡಿದ್ದರು. ಸಂಪೂರ್ಣ ಭಾರತೀಯ ತಂತ್ರಜ್ಞಾನದಲ್ಲಿ ಮೇಕ್ ಇನ್ ಇಂಡಿಯಾ ಯೋಜನೆಯಡಿ ಮುಂಬೈನ ಅಜಗಾಂವ್ ಡಾಕ್ ಯಾರ್ಡ್ ನಲ್ಲಿ ಈ ಜಲಾಂತರ್ಗಾಮಿ ನಿರ್ಮಾಣವಾಗಿತ್ತು.