ನ್ಯೂಸ್

ಹಾಸನಾಂಬೆ ದೇವಾಲಯದಲ್ಲಿ ಹೃದಯಾಘಾತದಿಂದ ಭಕ್ತ ಸಾವು

arunakunigal

ಹಾಸನ: ಹಾಸನಾಂಬೆ ದೇವಿಯ ದರ್ಶನ ಪಡೆಯಲು ಆಗಮಿಸಿದ್ದ ಭಕ್ತನೊಬ್ಬ ದೇಗುಲದ ಮಹಾದ್ವಾರದ ಬಳಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ.

ಹಾಸನ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಗಿರೀಶ್ (43) ಹೃದಯಾಘಾತದಿಂದ ಮೃತಪಟ್ಟರು. ಹಾಸನಾಂಬೆ ದೇವಿಯ ದರ್ಶನ ಪಡೆಯಲೆಂದು ಗುರುವಾರ ಬೆಳಗ್ಗೆ ದೇವಸ್ಥಾನಕ್ಕೆ ಆಗಮಿಸಿದ್ದ ಗಿರೀಶ್​, ಸಾಮಾನ್ಯ ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಎದೆನೋವು ಕಾಣಿಸಿಕೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.

ಸ್ಥಳದಲ್ಲಿದ್ದ ಪೊಲೀಸರು ಮತ್ತು ಭಕ್ತರು ಗಿರೀಶ್​ರ ರಕ್ಷಣೆಗೆ ಧಾವಿಸಿದ್ದರಾದರೂ ಸ್ಥಳದಲ್ಲೇ ಕೊನೆಯುಸಿರೆಳೆದರು. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.