ನ್ಯೂಸ್

ಜನರಿಗೆ ತೊಂದರೆ ಕೊಡಲು ಸರ್ಕಾರಕ್ಕೆ ಇಷ್ಟವಿಲ್ಲ: ಡಾ.ಸುಧಾಕರ್

arunakunigal

ಬೆಂಗಳೂರು: ಕರೊನಾ ವಿಚಾರದಲ್ಲಿ ಕಠಿಣ ನಿಯಮ ಜಾರಿಗೊಳಿಸಿ ಜನರಿಗೆ ತೊಂದರೆ ಕೊಡಲು ಸರ್ಕಾರಕ್ಕೆ ಇಷ್ಟವಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟಪಡಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್​, ವೈಜ್ಞಾನಿಕ ನೆಲೆಗಟ್ಟಿನಲ್ಲಿ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ. ನಾಳೆ(ಶುಕ್ರವಾರ) ಸಿಎಂ ನೇತೃತ್ವದಲ್ಲಿ ಸಭೆ ಇದೆ. ಆ ಸಭೆಯಲ್ಲಿ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ. ಜನರಿಗೆ ತೊಂದರೆ ಕೊಡಲು ಸರ್ಕಾರಕ್ಕೆ ಇಷ್ಟವಿಲ್ಲ. ಬೆಂಗಳೂರಿನಲ್ಲಿ ಟಫ್ ರೂಲ್ಸ್ ಬೇಕೋ, ಬೇಡವೋ ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ಆಗುತ್ತೆ ಎಂದರು.

ರಾಜ್ಯದಲ್ಲಿ ದಿನಕ್ಕೆ‌ 1.20 ಲಕ್ಷ ಕರೊನಾ ಕೇಸ್ ಬರುತ್ತೆ ಎಂದು ತಜ್ಞರು ಹೇಳಿದ್ದಾರೆ. ತಾಂತ್ರಿಕ ತಜ್ಞರು ವರದಿ ಕೊಟ್ಟಿದ್ದಾರೆ. ತಜ್ಞರ ಜತೆ ಚರ್ಚೆ ಬಳಿಕ ಮುಂದಿನ ತೀರ್ಮಾನ ಮಾಡುತ್ತೇವೆ. ಈಗ ತೆಗೆದುಕೊಂಡಿರುವ ಕ್ರಮಗಳ ಇಂಪ್ಯಾಕ್ಟ್ ಬಗ್ಗೆ ಚರ್ಚೆ ಮಾಡುತ್ತೇವೆ. ತಜ್ಞರ ಸಲಹೆಯಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸುಧಾಕರ್ ತಿಳಿಸಿದರು.