ಮದ್ದೂರು : ಪಟ್ಟಣದ ಪುರಸಭೆ ಆವರಣದಲ್ಲಿ ಗುರುವಾರ ರಾತ್ರಿ ಅಖಿಲ ಕರ್ನಾಟಕ ವಿಶ್ವಕರ್ಮ ಹಾಗೂ ಕಸ್ತೂರಿ ಜನಪರ ವೇದಿಕೆ ವತಿಯಿಂದ ಭೀಮಾ ಕೋರೆಗಾಂವ್ ವಿಜಯೋತ್ಸವ ದಿನ ಆಚರಣೆ ಮಾಡಲಾಯಿತು.
ಅಖಿಲ ಕರ್ನಾಟಕ ವಿಶ್ವಕರ್ಮ ಯುವ ಘಟಕದ ಅಧ್ಯಕ್ಷ ಮಳವಳ್ಳಿ ಶ್ರೀನಿವಾಸ ದೀಪ ನಮನ ಸಲ್ಲಿಸಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಎಲ್ಲ ಶೋಷಿತ ಸಮುದಾಯಗಳಿಗೆ ಹಾಗೂ ಮಹಿಳೆಯರಿಗೆ ಹಕ್ಕುಗಳನ್ನು ನೀಡಿ ಎಲ್ಲರಲೂ ಆತ್ಮವಿಶ್ವಾಸ ವೃದ್ಧಿಸುವಂತೆ ಮಾಡಿದ ಮಹಾನ್ ಚೇತನ. ಅವರು ಸಂವಿಧಾನ ರಚಿಸದೇ ಇದ್ದಿದ್ದರೆ ನಾವು ನೆಮ್ಮದಿಯ ಬದುಕು ನಡೆಸಲು ಆಗುತ್ತಿರಲಿಲ್ಲ. ಅವರ ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯೋಣ ಎಂದರು.
ಪ್ರಗತಿ ಪರ ಸಂಘಟಕ ಕೆ.ಟಿ.ಶಿವಕುಮಾರ್ ಮಾತನಾಡಿ, ಜ.1 ರಂದು ಅಂಬೇಡ್ಕರ್ ಅವರು ಕೋರೆಗಾಂವ್ ಯುದ್ಧ ನಡೆದ ಸ್ಥಳಕ್ಕೆ ಪ್ರತಿವರ್ಷ ಆಗಮಿಸಿ ವಿಜಯಸ್ಥಂಭಕ್ಕೆ ನಮಿಸುತ್ತಿದ್ದರು. ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು ಅವರ ತತ್ತ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳೋಣ ಎಂದು ತಿಳಿಸಿದರು.
ಕೆಸ್ತೂರು ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಉಮಾಶಂಕರ್, ಪುರಸಭಾ ಸದಸ್ಯೆ ಪ್ರಮಿಳಾ, ಪ್ರಗತಿಪರ ಚಿಂತಕ ಕೆ.ಟಿ.ಶಿವಕುಮಾರ್, ಅಹಿಂದ ಸಂರಕ್ಷಣಾ ವೇದಿಕೆಯ ಸಂಘಟನಾ ಕಾರ್ಯದರ್ಶಿ ಪಿ.ಶಶಿಕುಮಾರ್, ವಿಶ್ವಕರ್ಮ ಜಿಲ್ಲಾ ಉಸ್ತುವಾರಿ ತೈಲೂರು ಆನಂದ್,ಮುಖಂಡರಾದ ರಾಜ್‌ಕುಮಾರ್, ಮೋಹನ್, ಚಿಕ್ಕಣ್ಣ, ವೆಂಕಟೇಶ್ ಇದ್ದರು.