ನ್ಯೂಸ್

ಹಿರಿಯ ಕವಿ, ಚಿಂತಕ ಜರಗನಹಳ್ಳಿ ಶಿವಶಂಕರ್ ನಿಧನ

ಬೆಂಗಳೂರು: ಕನ್ನಡದ ಹಿರಿಯ ಕವಿ, ಚಿಂತಕ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜರಗನಹಳ್ಳಿ ಶಿವಶಂಕರ್ ಅವರು ಇಂದು(ಮಂಗಳವಾರ) ಬೆಳಗ್ಗೆ ನಿಧನರಾದರು. ಇವರಿಗೆ 72 ವರ್ಷ ವಯಸ್ಸಾಗಿತ್ತು. ಇತ್ತೀಚಿಗೆ ಕೋವಿಡ್‌ ಸೋಂಕು ತಗುಲಿತ್ತು.

ಶರಣ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿದ್ದ ಜರಗನಹಳ್ಳಿ ಶಿವಶಂಕರ್, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಆಗಿಯೂ ಕಾರ್ಯ ನಿರ್ವಹಿಸಿದ್ದರು. ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.