ನ್ಯೂಸ್

ಇನ್ಮುಂದೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ತೃತೀಯ ಲಿಂಗಿಗಳೂ ಕೆಲಸ ಮಾಡ್ಬಹುದು! ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಇನ್ಮುಂದೆ ಪೊಲೀಸ್ ಇಲಾಖೆಯಲ್ಲಿ ತೃತೀಯ ಲಿಂಗಿಗಳೂ ಕೆಲಸ ಮಾಡಬಹುದು! ಇಲಾಖೆಯ ಪ್ರತಿ ವಿಭಾಗದಲ್ಲಿಯೂ ಮಂಗಳಮುಖಿಯರಿಗೆ ಶೇ.1 ಮೀಸಲಾತಿ ನೀಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ತೃತೀಯ ಲಿಂಗಿಗಳ ಬಹುದಿನದ ಕನಸು ನನಸಾಗುತ್ತಿದ್ದು, ಕರ್ನಾಟಕದಲ್ಲಿ ಇವರಿಗೀಗ ಸುವರ್ಣ ಅವಕಾಶ ಸಿಕ್ಕಿದೆ. ಇದೇ ಮೊದಲ ಬಾರಿಗೆ ಲೈಂಗಿಕ ಅಲ್ಪಸಂಖ್ಯಾತರಿಗೆ ಪೊಲೀಸ್​ ಕೆಲಸಕ್ಕೆ ಅರ್ಜಿ ಸಲ್ಲಿಸುವಂತೆ ಕರ್ನಾಟಕ ಪೊಲೀಸ್ ಇಲಾಖೆ ಆಹ್ವಾನಿಸಿದೆ. ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಡಿ.20ರಿಂದ 2022ರ ಜನವರಿ 18ರವರೆಗೆ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿದೆ. ಮಾಹಿತಿಕೆ ಇಲಾಖಾ ವೆಬ್​ಸೈಟ್​ಗೆ ಭೇಟಿ ನೀಡಿ.

ಪೊಲೀಸ್​ ಇಲಾಖೆಯಲ್ಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿರುವ ಮಾಹಿತಿ.

ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಪಡೆಯುವುದು ತೃತೀಯ ಲಿಂಗಿಗಳ ಮೂಲಭೂತ ಹಕ್ಕು ಎಂದು ಈ ಹಿಂದೆ ಸುಪ್ರೀಂ ಕೋರ್ಟ್​ ಹೇಳಿದ್ದನ್ನು ಸ್ಮರಿಸಬಹುದು.